ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಜಾರಿ: ಸಂಪುಟ ನಿರ್ಧಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಜಾರಿ: ಸಂಪುಟ ನಿರ್ಧಾರ
ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ
NRB
ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಕಾಯ್ದೆ ಜಾರಿ ಮಾಡಲು ಶುಕ್ರವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಒಪ್ಪಿಗೆ ಪಡೆಯಲು ಸಾಧ್ಯವಾಗಿರಲಿಲ್ಲ. ಆ ಕಾರಣಕ್ಕಾಗಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಹಿಂದೆ ಇದ್ದ ಕೋಕಾ ಕಾಯ್ದೆಗೆ ಹಲವು ತಿದ್ದುಪಡಿಗಳನ್ನು ತರಲಾಗಿದೆ ಎಂದ ಅವರು, ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿದವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ನೀಡಲು ಕಾಯ್ದೆಯಡಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಕಾಯ್ದೆಯಡಿ ಭಯೋತ್ಪಾದಕ ಕೃತ್ಯವನ್ನು ವ್ಯವಸ್ಥಿತ ಅಪರಾಧವೆಂದು ಪರಿಗಣಿಸಲಾಗುವುದು. ಇಂಥ ಕೃತ್ಯಗಳಲ್ಲಿ ಭಾಗಿಯಾದವರಿಗೆ 1ಲಕ್ಷ ರೂ.ಗಳಿಂದ 5ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುವುದು. ತನಿಖೆ ಸಂದರ್ಭದಲ್ಲಿ ಆರೋಪಿಗಳ ಆಸ್ತಿ ಮತ್ತು ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಹೇಳಿದರು.

ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದವರ ಬಗ್ಗೆ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿ ಈ ಹಿಂದಿನ ಕಾಯ್ದೆಯಲ್ಲಿ ಅವಕಾಶವಿದ್ದ 180ದಿನಗಳ ಬದಲಿಗೆ 365 ದಿನಗಳ ಅವಕಾಶ ಕೊಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೊಂಡಜ್ಜಿ ಕೊಲೆ: ಶಾಸಕ ಹರೀಶ್ ಜಾಮೀನು ಅರ್ಜಿ ವಜಾ
ಸಚಿವರ ನಿವಾಸ ವೆಚ್ಚ: ಎಸ್.ಎಂ.ಕೃಷ್ಣ ಅವಧಿಯಲ್ಲೇ ಅಧಿಕ!
ಗಡಿ ಜಿಲ್ಲೆಗಳಲ್ಲಿ ನಾಡು ನುಡಿ ಜಾಗೃತಿ: ಚಂದ್ರು
ದೇವೇಗೌಡರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ದ್ರೋಹ: ಪುಟ್ಟಸ್ವಾಮಿ
ಲಾಕಪ್ ಡೆತ್: ಐವರು ಪೊಲೀಸರಿಗಾಗಿ ಸಿಓಡಿ ಶೋಧ
ತೀರ್ಥಹಳ್ಳಿ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ