ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಕೋಕಾ' ಕಾಯ್ದೆ ತಿದ್ದುಪಡಿಗೆ ಡಿಕೆಶಿ ಆಕ್ರೋಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಕೋಕಾ' ಕಾಯ್ದೆ ತಿದ್ದುಪಡಿಗೆ ಡಿಕೆಶಿ ಆಕ್ರೋಶ
ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೋಕಾ ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಲು ಹೊರಟಿರುವುದಕ್ಕೆ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊದಲಿದ್ದ ಕಾಯ್ದೆಗೂ ಈಗೀನ ಕಾಯ್ದೆಗೂ ತುಂಬಾ ವ್ಯತ್ಯಾಸವಿದೆ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೂಪುಗೊಳಿಸಿದ ಕಾಯ್ದೆ ಸೂಕ್ತವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೋಕಾ ಕಾಯ್ದೆಗೆ ತಿದ್ದುಪಡಿ ತರುವ ವಿಷಯದ ಕುರಿತು ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು. ಅಲ್ಲದೇ ಸಭೆಯ ನಿರ್ಧಾರದ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಕಾಯ್ದೆ ಜಾರಿ ಮಾಡಲು ಶುಕ್ರವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಒಪ್ಪಿಗೆ ಪಡೆಯಲು ಸಾಧ್ಯವಾಗಿರಲಿಲ್ಲ. ಆ ಕಾರಣಕ್ಕಾಗಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮೇ 8ರಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಜೆಡಿಎಸ್ ಆಗ್ರಹ
ರಾಜಧಾನಿಯಲ್ಲಿ ಗರಿಗೆದರಿದ ಬಿಬಿಎಂಪಿ ಚುನಾವಣೆ
ವಿಚ್ಛೇದನ ಪ್ರಕರಣ: ಶ್ರುತಿ ಅಧ್ಯಕ್ಷಗಾದಿಗೆ ತೊಡಕು
ಸಂಪುಟದಿಂದ ನನ್ನ ಕೈ ಬಿಡಲ್ಲ: ಸಚಿವ ಉದಾಸಿ
ಓಬಳಾಪುರಂ ಗಣಿಗಾರಿಕೆ ಸ್ಥಗಿತವಿಲ್ಲ: ಜನಾರ್ದನ ರೆಡ್ಡಿ
ಕಾಲೇಜುಗಳ ಶೂನ್ಯ ಸಂಪಾದನೆ: ತನಿಖೆಗೆ ತಜ್ಞರ ತಂಡ