ಈ ವರ್ಷ ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಯ ಗುರಿ ಸರಕಾರದ ಮುಂದಿಲ್ಲ ಎಂದು ಪ್ರಾಥಮಿಕ ಹಾಗೂ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಪಿಯುಸಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು 60 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳನ್ನು ಹೊಸದಾಗಿ ತೆರೆಯಲಾಗುವುದು. ಅಲ್ಲದೆ 100 ಖಾಸಗಿ ಪದವಿ ಪೂರ್ವ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುವುದು ಎಂದು ಹೇಳಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಾಲೆಗಳಿಗೆ ಶಿಕ್ಷಕರನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಮೇ ಅಂತ್ಯದೊಳಗೆ ಪ್ರೌಢ ಶಾಲಾ ಶಿಕ್ಷಕರನ್ನು ಹಾಗೂ ಜೂನ್‌ನಲ್ಲಿ ಪ್ರಾಥಮಿಕ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ವಿಧಾನವನ್ನು ಬದಲಾವಣೆ ಮಾಡಲು ಯೋಚಿಸಲಾಗಿದೆ. ಈ ವರ್ಷ ಪಿಯುಸಿಯಲ್ಲಿ ಕಡಿಮೆ ಫಲಿತಾಂಶ ಬಂದ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚಿಸಲಾಗುವುದು ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಕಾಗೇರಿ ಹೇಳಿದರು. |