ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೃಷಿ ಭೂಮಿ ಖರೀದಿಗೆ ನಿರ್ಬಂಧ ಸಡಿಲಿಕೆ: ಆಚಾರ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೃಷಿ ಭೂಮಿ ಖರೀದಿಗೆ ನಿರ್ಬಂಧ ಸಡಿಲಿಕೆ: ಆಚಾರ್ಯ
ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧ ಸಡಿಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.

ಅದೇ ರೀತಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಂಬಂಧ ಭೂ ಪರಿವರ್ತನೆ ನಿಯಮಗಳನ್ನು ಸರಳಿಕರಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಆರ್ಥಿಕ ಹಿಂಜರಿತನದಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆ ವರಮಾನ ಪ್ರಮಾಣ ಕಡಿಮೆಯಾಗಿದೆ. ಜತೆಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹದಲ್ಲೂ ಇಳಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಭೂಮಿ ಖರೀದಿ ಹಾಗೂ ಭೂ ಪರಿವರ್ತನೆ ನಿಯಮಗಳ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಂದಿನ ವಾರ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ಸರ್ಕಾರ ನಿಗದಿಪಡಿಸುವ ಶುಲ್ಕ ಪಾವತಿಸಿದರೆ ಭೂ ಪರಿವರ್ತನೆಗೆ ಅವಕಾಶ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಎರಡು ಎಕರೆವರೆಗೆ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಗ್ರಾಮ ಪಂಚಾಯ್ತಿಗಳಿಗೆ ನೀಡುವ ಚಿಂತನೆ ನಡೆದಿದೆ ಎಂದರು.

ಕೃಷಿ ಭೂಮಿಯನ್ನು ಕೃಷಿಯೇತರರು ಖರೀದಿಸಲು ಅವಕಾಶ ಮಾಡಿಕೊಟ್ಟರೆ ರಿಯಲ್ ಎಸ್ಟೇಟ್ ಮಾಫಿಯಾಕ್ಕೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಆಚಾರ್ಯ ಈ ಸಂದರ್ಭದಲ್ಲಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಕ್ಸಲ್ ಸಮಸ್ಯೆ ನಿವಾರಣೆಗೆ ಸರ್ಕಾರ ಬದ್ಧ: ವಿ.ಎಸ್.ಆಚಾರ್ಯ
ಫಲಿತಾಂಶ ಹೊರಬೀಳುವ ಮುನ್ನ ಡಿಕೆಶಿ ವಿದೇಶಕ್ಕೆ!
ಪೊಲೀಸ್ ಇಲಾಖೆ-9,431 ಹುದ್ದೆಗೆ ನೇಮಕ: ಆಚಾರ್ಯ
ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್ ಇಲ್ಲ: ಕೆ.ಜೈರಾಜ್
ಗುಡಿಸಲು ತೆರವು-ನೈಸ್ ಸಂಸ್ಥೆ ವಿರುದ್ಧ ಪ್ರತಿಭಟನೆ
ಮಂಗಳೂರು: ಪಾತಕಿ ಪಾಂಡುರಂಗ ಪೈ ಹತ್ಯೆ