ಲೋಕಸಭಾ ಚುನಾವಣೆಯ ಅಂತಿಮ ಘಟ್ಟವಾದ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದ್ದು ಮತ ಎಣಿಕೆ ಕೇಂದ್ರಗಳಲ್ಲಿ ಸಿಬ್ಬಂದಿ ವರ್ಗ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಂಡಿದೆ. ಹಾಗೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಚಿತ್ತ ಎಣಿಕೆ ಕೇಂದ್ರಗಳತ್ತ ನೆಟ್ಟಿದೆ.
ಇದೇ ಮೊದಲ ಬಾರಿಗೆ 'ರಿಯಲ್ ಟೈಂ ಸಾಫ್ಟ್‌ವೇರ್' ಎಂಬ ಹೊಸ ವೆಬ್‌ಸೈಟ್ ತಂತ್ರಜ್ಞಾನವನ್ನು ರೂಪಿಸಲಾಗಿದೆ. ಪ್ರತಿ 30 ಸೆಕೆಂಡ್‌ಗೆ ಫಲಿತಾಂಶ ನೀಡುವ ಮೂಲಕ ಪ್ರತಿ ಕ್ಷೇತ್ರದ ಅಭ್ಯರ್ಥಿಗಳ ಮತಗಳ ವಿವರವನ್ನು ತಿಳಿದುಕೊಳ್ಳಬಹುದು ಎಂದು ಆಯೋಗದ ಮೂಲಗಳು ತಿಳಿಸಿವೆ.
ಬೆಂಗಳೂರು ಸೆಂಟ್ರಲ್, ಉತ್ತರ, ದಕ್ಷಿಣ ಕ್ಷೇತ್ರದ ಮತ ಎಣಿಕೆ ಕಾರ್ಯ ನಗರದ ಮೌಂಟ್ ಕಾರ್ಮೆಲ್ ಕಾಲೇಜು, ಕಲಾ ಕಾಲೇಜು ಹಾಗೂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ಹಾಗೂ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿವೆ.
ಮತ ಎಣಿಕೆ ಕೇಂದ್ರಗಳಲ್ಲಿ ಅಭ್ಯರ್ಥಿಗಳ, ಅವರ ಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಾಹನ ನಿಲುಗಡೆಗೆೆ ಸೂಕ್ತ ವ್ಯವಸ್ಥೆ ಹಾಗೂ ಪ್ರತ್ಯೇಕ ದ್ವಾರಗಳನ್ನು ಕಲ್ಪಿಸಲಾಗಿದೆ. |