ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್‌‌ಗೆ ನೆರವಾಗದ 'ಜೆಡಿಎಸ್ ಸಾಥ್'
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್‌‌ಗೆ ನೆರವಾಗದ 'ಜೆಡಿಎಸ್ ಸಾಥ್'
NRB
15ನೇ ಲೋಕಸಭಾ ಚುನಾವಣೆಯ ಹಣಾಹಣಿಯ ಸಂದರ್ಭದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರ ಇಡುವ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯದಲ್ಲಿ ಕಾಂಗ್ರೆಸ್ ಜತೆ ರಹಸ್ಯ ಒಪ್ಪಂದ ಮಾಡಿಕೊಳ್ಳುವ ಮೂಲಕ ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಪರೋಕ್ಷವಾಗಿ ಬೆಂಬಲ ನೀಡಿತ್ತು. ಆದರೂ ಮತದಾರ ಪ್ರಭು ಮಾತ್ರ ಬಿಜೆಪಿ ಕೈ ಹಿಡಿದಿರುವುದು ಫಲಿತಾಂಶದ ಬಳಿಕ ಸ್ಪಷ್ಟವಾಯಿತು.

28ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಕಾಂಗ್ರೆಸ್‌ಗೆ ಅನುಕೂಲವಾಗಲು ವೇದಿಕೆ ನಿರ್ಮಾಣ ಮಾಡಿಕೊಟ್ಟಿತ್ತು. ಆದರೆ ಗೌಡರ ಲೆಕ್ಕಚಾರ ತಲೆಕೆಳಗಾಗಿದ್ದು, ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಗು ಬೀರಿತ್ತು.

ರಾಜ್ಯದ ಪ್ರಮುಖ ಕ್ಷೇತ್ರಗಳಾದ ಬಳ್ಳಾರಿ, ಶಿವಮೊಗ್ಗ, ಚಿಕ್ಕೋಡಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸದೆ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು.

ಜೆಡಿಎಸ್ ಆ ಮಟ್ಟಿಗೆ ಸಾಥ್ ನೀಡಿದರೂ ಕೂಡ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿತ್ತು. ಆದರೆ ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಲ್ಪ ಪ್ರಮಾಣದ ಅಂತರದಿಂದ ಸೋಲನ್ನನುಭವಿಸಿದ್ದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರು ಕಾಂಗ್ರೆಸ್‌ನ ಎನ್.ವೈ.ಹನುಮಂತಪ್ಪ ಅವರನ್ನು ಕೇವಲ 2,243ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಅವರು ಕಾಂಗ್ರೆಸ್‌ನ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು 2,043ಮತಗಳ ಅಂತರದಿಂದ ಸೋಲಿಸುವ ಮೂಲಕ ಜಯ ಪಡೆದರು.

ಅದೇ ರೀತಿ ಜನತಾದಳ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಚಿತ್ರದುರ್ಗ, ಕೊಪ್ಪಳ, ತುಮಕೂರು ಹಾಗೂ ಉತ್ತರ ಕನ್ನಡ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲವಾಗಿತ್ತು. ಇಷ್ಟೆಲ್ಲಾ ಕಸರತ್ತು ನಡೆಸಿದರೂ ಕೂಡ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕೇವಲ ಆರು ಸ್ಥಾನ, ಜೆಡಿಎಸ್ 3ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಚಿವರ ತಲೆದಂಡ ಇಲ್ಲ: ಸದಾನಂದ ಗೌಡ
ಅಭಿವೃದ್ಧಿಗಾಗಿ 'ಕೈ' ಹಿಡಿಯಲು ಸಿದ್ಧ: ಕುಮಾರಸ್ವಾಮಿ
ಅಸಮರ್ಪಕ ಟಿಕೆಟ್ ಹಂಚಿಕೆ ಸೋಲಿಗೆ ಕಾರಣ: ದೇಶಪಾಂಡೆ
ತಲೆಕೆಳಗಾದ ಲೆಕ್ಕ-ಮೌನಕ್ಕೆ ಶರಣಾದ ದೇವೇಗೌಡ
ಬಿಜೆಪಿಯಿಂದ ವರ್ತೂರ್ ಪ್ರಕಾಶ್‌ ತಲೆದಂಡ?
ಖರ್ಗೆ-ಮೊಯ್ಲಿ ನಡುವೆ 'ಮಂತ್ರಿಗಿರಿ' ಪೈಪೋಟಿ ಶುರು!