ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಸ್‌ಎಸ್‌‌ಎಲ್‌‌ಸಿ: ಮರು ಮೌಲ್ಯಮಾಪನಕ್ಕೆ ದಾಖಲೆ ಪ್ರಮಾಣದ ಅರ್ಜಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಸ್‌ಎಸ್‌‌ಎಲ್‌‌ಸಿ: ಮರು ಮೌಲ್ಯಮಾಪನಕ್ಕೆ ದಾಖಲೆ ಪ್ರಮಾಣದ ಅರ್ಜಿ
2008-09ನೇ ಸಾಲಿನ ಎಸ್ಎಸ್ಎಲ್‌‌ಸಿ ಫಲಿತಾಂಶವನ್ನು ಪರೀಕ್ಷೆ ಮುಗಿದ 25 ದಿನಗಳಲ್ಲಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿಗಳನ್ನು ವಿದ್ಯಾರ್ಥಿಗಳು ಸಲ್ಲಿಸುತ್ತಿದ್ದಾರೆ. ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುವುದನ್ನು ಮುಂದುವರಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.

ಹಿಂದಿನ ವರ್ಷಕ್ಕಿಂತ ಈ ವರ್ಷ ಮೌಲ್ಯಮಾಪನ ಕಾರ್ಯಕ್ಕೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಾಗಿ ಮಂಡಳಿ ಹೇಳಿತ್ತು. ಆದರೆ ತನ್ನ ಹಿಂದಿನ ಚಾಳಿಯನ್ನು ಮುಂದುವರಿಸಿದೆ. ಚುನಾವಣಾ ಫಲಿತಾಂಶ ಪ್ರಕಟಿಸುವ ಮುನ್ನ ಎಸ್ಎಸ್ಎಲ್‌‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ ಮಾದರಿಯಾಗುವ ತರಾತುರಿಯಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಿದ ಫಲವಾಗಿಯೇ ಈ ಬಾರಿ ಸಹಸ್ರಾರು ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿವೆ.

ರಾಜ್ಯ ಪ್ರೌಢ ಶಿಕ್ಷಣ ಇಲಾಖೆಯ ನಿರ್ಲಕ್ಷದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಪರಿಸ್ಥಿತಿ ಉಂಟಾಗಿದೆ. ಹೆಚ್ಚು ಅಂಕ ಬರುವ ವಿದಾರ್ಥಿಗಳಿಗೆ ಕಡಿಮೆ ಅಂಕ ಕೊಟ್ಟಿದ್ದಾರೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿಗಳು 300 ರೂ. ಶುಲ್ಕ ಪಾವತಿಸಿ ಉತ್ತರ ಪತ್ರಿಕೆಯ ಛಾಯಾಪ್ರತಿ ಪಡೆದು ನೋಡಿದಾಗ ಶಿಕ್ಷಕರ ನಿರ್ಲಕ್ಷ್ಯ ಗೋಚರಿಸಿದೆ.

ಈ ಲೋಪವನ್ನು ತೇಜಸ್ ಮಂಡಳಿಯ ಅಧಿಕಾರಿಗಳ ಗಮನಕ್ಕೆ ತಂದಾಗ, ಮಂಡಳಿಯಿಂದ ತಪ್ಪಿಗೆ ಕ್ಷಮೆಯನ್ನೂ ಕೋರಿದೆ. ಅಲ್ಲದೆ ಲೋಪ ಎಸಗಿದ ಶಿಕ್ಷಕರ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಡಿ.ಎಸ್. ರಾಜಣ್ಣ ಭರವಸೆ ನೀಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇವೇಗೌಡ 77ನೇ ಹುಟ್ಟು ಹಬ್ಬ ಆಚರಣೆ
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿ.ವಿ.ಸದಾನಂದ ಗೌಡ
ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಅಖಾಡಕ್ಕೆ?
ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ಹಣ ಬಲದಿಂದ ಬಿಜೆಪಿ ಜಯ ಸಾಧಿಸಿದೆ: ಮಲ್ಲಿಕಾರ್ಜುನ ಖರ್ಗೆ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!