ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿ: ಕರವೇ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿ: ಕರವೇ
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. ಕನ್ನಡದ ಧ್ವನಿಯಾಗುವ ಮೂಲಕ ಹಿಂದಿ ಭಾಷೆಗಿಂತ ನಮ್ಮ ಭಾಷೆ ಕಮ್ಮಿಯಿಲ್ಲ ಎಂದು ಸಾಬೀತುಪಡಿಸಿ ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನಲ್ಲಿ ಉತ್ತರ ಭಾರತೀಯರ ಪ್ರಾಬಲ್ಯ ಹೆಚ್ಚಾಗುತ್ತಿದೆ. ಕರ್ನಾಟಕ ಮತ್ತು ಕನ್ನಡ ಭಾಷೆಯ ಶ್ರೇಯೋಭಿವೃದ್ದಿ ಉದಾಸೀನತೆಗೆ ಒಳಗಾಗುತ್ತಿದೆ. ನಮ್ಮ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದ್ದರೂ ಮದ್ರಾಸ್ ಹೈಕೋರ್ಟ್‌‌‌ನಲ್ಲಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದ ಎಲ್ಲಾ ಸಂಸದರು ಈ ಬಗೆಯ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಸಚಿವ ಸ್ಥಾನ-ಎಚ್.ಡಿ.ಕುಮಾರಸ್ವಾಮಿ ಕನಸು ಭಗ್ನ?
ಕಾಫಿ ಬೆಳೆಗಾರರ ಪ್ಯಾಕೇಜ್‌‌ಗೆ ಆದ್ಯತೆ: ಡಿ.ಬಿ.ಚಂದ್ರೇಗೌಡ
ಚಿತ್ರಪ್ರದರ್ಶನ ಸಮಯ ಬದಲಾವಣೆ-ಕುಣಿತಕ್ಕೆ ಬ್ರೇಕ್: ಆಚಾರ್ಯ
ಹಣಬಲ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕ: ಜೆಡಿಎಸ್
ಬೀದರ್ ಉಪಚುನಾವಣೆ: ಮರು ಮತಎಣಿಕೆಗೆ ಬಿಜೆಪಿ ಆಗ್ರಹ