ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಒಂದನೇ ತರಗತಿಯಿಂದ ಏಳನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಲು ನಿರ್ಧರಿಸಲಾಗಿದೆ. ಈ ಸೌಲಭ್ಯ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಇದರಿಂದ ರಾಜ್ಯಾದ್ಯಾಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಆರ್.ಅಶೋಕ್ ಈ ಯೋಜನೆಯಿಂದ ಸಂಸ್ಥೆಗೆ ಸ್ವಲ್ಪ ಹೊರೆಯಾಗಬಹುದು. ಆದರೂ ಸಾರಿಗೆ ಸಂಸ್ಥೆ ಲಾಭದಲ್ಲಿದೆ. ಆ ಲಾಭವನ್ನು ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವುದರ ಮೂಲಕ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಎಂಟಿಸಿ ಹಾಗೂ ಕೆಎಸ್ಆರ್‌‌ಟಿಸಿಗಳ ಎಲ್ಲಾ ಬಸ್ಸಿನಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಹಾಗೂ ಸಂಸ್ಥೆಯ ಅನುಕೂಲ ಪಡೆದುಕೊಳ್ಳಬಹುದಾಗಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅತಿ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದರಾಮಯ್ಯ
ಚಿತ್ರದುರ್ಗ: ಎತ್ತಿನಗಾಡಿ ಹಳ್ಳಕ್ಕೆ ಬಿದ್ದು 19ಸಾವು
ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿ: ಕರವೇ
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಸಚಿವ ಸ್ಥಾನ-ಎಚ್.ಡಿ.ಕುಮಾರಸ್ವಾಮಿ ಕನಸು ಭಗ್ನ?
ಕಾಫಿ ಬೆಳೆಗಾರರ ಪ್ಯಾಕೇಜ್‌‌ಗೆ ಆದ್ಯತೆ: ಡಿ.ಬಿ.ಚಂದ್ರೇಗೌಡ