ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರಣಿ ಸ್ಫೋಟ: ಕೋರ್ಟ್‌‌ಗೆ ಆರೋಪಪಟ್ಟಿ ಸಲ್ಲಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರಣಿ ಸ್ಫೋಟ: ಕೋರ್ಟ್‌‌ಗೆ ಆರೋಪಪಟ್ಟಿ ಸಲ್ಲಿಕೆ
NRB
ನಗರದಲ್ಲಿ ಕಳೆದ ವರ್ಷ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಸಂಬಂಧ ಬೆಂಗಳೂರು ನಗರ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ 28ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಸರಣಿ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 9ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಘಟನೆಯ ಸಂಬಂಧ 4ಮಂದಿಯನ್ನು ಎನ್‌ಕೌಂಟರ್‌‌ನಲ್ಲಿ ಹೈತ್ಯೆಗೈಯಲಾಗಿದ್ದು, ಕೇರಳ ಹಾಗೂ ಆಂಧ್ರಪ್ರದೇಶ ಮೂಲದ 10ಮಂದಿ ಶಂಕಿತ ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಹಾಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 189ಮಂದಿಯನ್ನು ಸಾಕ್ಷಿದಾರರನ್ನಾಗಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ 61ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದು, 157ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ.

ಆರೋಪಪಟ್ಟಿ 718 ರಿಂದ ಸಾವಿರ ಪುಟಗಳನ್ನು ಹೊಂದಿದೆ. ಆರೋಪ ಪಟ್ಟಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಸ್ಫೋಟ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದಂತಾಗಿದೆ.

ಉಳಿದ 7ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಸಲ್ಲಿಸಲಾಗುವುದು. 28ಮಂದಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿ 10ಮಂದಿಯನ್ನು ಬಂಧಿಸಲಾಗಿದೆ. ನಾಲ್ಕು ಮಂದಿ ಉಗ್ರರು ಜಮ್ಮು-ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಹಾಗೂ 12ಮಂದಿ ನಾಪತ್ತೆಯಾಗಿದ್ದು, ಅದರಲ್ಲಿ ನಾಲ್ಕು ಮಂದಿ ವಿದೇಶಿಯರಾಗಿದ್ದು, 8ಮಂದಿ ಭಾರತದವರಾಗಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಅತಿ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದರಾಮಯ್ಯ
ಚಿತ್ರದುರ್ಗ: ಎತ್ತಿನಗಾಡಿ ಹಳ್ಳಕ್ಕೆ ಬಿದ್ದು 19ಸಾವು
ಸಂಸದರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಲಿ: ಕರವೇ
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಸಚಿವ ಸ್ಥಾನ-ಎಚ್.ಡಿ.ಕುಮಾರಸ್ವಾಮಿ ಕನಸು ಭಗ್ನ?