ವಿಧಾನಸಭೆ ಪ್ರತಿ ಪಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಕೂಡ ಸಿದ್ದರಾಮಯ್ಯ ಅವರೇ ನಾಯಕರಾಗಲಿ ಎಂದು ಅವರ ಪರವಾಗಿ ಧ್ವನಿ ಎತ್ತಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ದೆಹಲಿಗೆ ತೆರಳಿರುವ ಸಿದ್ದರಾಮಯ್ಯನವರಿಗೆ ಪ್ರತಿ ಪಕ್ಷದ ನಾಯಕನ ಸ್ಥಾನ ಖಚಿತವಾಗುವ ಲಕ್ಷಣಗಳು ಕಾಣುತ್ತಿವೆ. ರಾಜ್ಯದ ಉಸ್ತುವಾರಿ ಹೊತ್ತಿರುವ ಗುಲಾಂ ನಬೀ ಆಜಾದ್ ಕೂಡ ಸಮ್ಮತಿ ಸೂಚಿಸಿದ್ದಾರೆ. ಆದರೆ ಅಧಿಕೃತವಾಗಿ ಮಾತ್ರ ಘೋಷಣೆಯಾಗಿಲ್ಲ. ಕೇಂದ್ರದ ಸಂಪುಟ ರಚನೆಯಾದ ನಂತರ ಈ ಬಗ್ಗೆ ಚಿಂತನೆ ನಡೆಸುವುದಾಗಿ ಭರವಸೆ ನೀಡಿದ್ದರು.
ದೆಹಲಿಗೆ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡು ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್, ಕೇಂದ್ರದ ಮಾಜಿ ಸಚಿವರಾದ ಆಸ್ಕರ್ ಫರ್ನಾಂಡಿಸ್ ಹಾಗೂ ಕೇಂದ್ರದ ಮಾಜಿ ರಕ್ಷಣಾ ಸಚಿವರಾದ ಎ.ಕೆ ಆಂಟನಿ ಅವರನ್ನು ಭೇಟಿ ಮಾಡಿಸಿ ಒತ್ತಾಯಿಸಿದ್ದಾರೆ.
ಖರ್ಗೆ ಲೋಕಸಭೆ ಸದಸ್ಯರಾಗಿ ಆಯ್ಕೆ ಆಗಿರುವುದರಿಂದ ಆ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನೇ ಅಯ್ಕೆ ಮಾಡಬೇಕು ಎಂದು ದೇಶಪಾಂಡೆ ನಾಯಕರಲ್ಲಿ ಒತ್ತಡ ಹೇರಿದ್ದಾರೆ. |