ರಾಜ್ಯದ ಸಚಿವ ಸಂಪುಟದಲ್ಲಿ ಯಾವುದೇ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಮಾಡುವ ಯಾವ ಯೋಚನೆಯೂ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಅಂತಹ ಯಾವುದೇ ಪ್ರಯತ್ನ ಮಾಡುವುದಿಲ್ಲ. ರಾಜ್ಯದ ಸುಧಾರಣೆ ಹೆಚ್ಚಿಸಲು ಗಮನ ಕೊಟ್ಟಿದ್ದೇನೆ. ಸಂಪುಟ ಪುನಾರಚನೆ, ಸಚಿವರ ವಜಾ ಇವೆಲ್ಲ ವದಂತಿಯಷ್ಟೆ ಎಂದು ಹೇಳಿದರು.
ಸಂಪುಟ ಪುನಾರಚನೆ ಮಾಡಲು ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಯಾವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಯೋಚನೆ ಮಾಡಲಾಗಿಲ್ಲ ಎಂದರು.
ಲೋಕಸಭಾ ಚುನಾವಣೆ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಮಾಡಿ ಕೆಲವು ಸಚಿವರಿಗೆ ಕೊಕ್ ನೀಡುತ್ತಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. |