ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯಕ್ಕೆ ಈವರೆಗೂ ಕ್ಯಾಬಿನೆಟ್ ದರ್ಜೆ ಸಿಕ್ಕಿಲ್ಲ: ಕೃಷ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಕ್ಕೆ ಈವರೆಗೂ ಕ್ಯಾಬಿನೆಟ್ ದರ್ಜೆ ಸಿಕ್ಕಿಲ್ಲ: ಕೃಷ್ಣ
ಕೇಂದ್ರ ಸಚಿವ ಸಂಪುಟದಲ್ಲಿ ಈ ಬಾರಿ ರಾಜ್ಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗುವ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಯುಪಿಎ ಸರ್ಕಾರದಲ್ಲಿ ರಾಜ್ಯ ಸಂಸದರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನ ಸಿಕ್ಕಿರಲಿಲ್ಲ. ಹಿಂದೆ ಆಗಿರುವ ಅನ್ಯಾಯವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಸೂಕ್ತ ನಿರ್ಣಯ ಕೈಗೊಳ್ಳುವ ವಿಶ್ವಾಸ ನನಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ತಾನು ಎರಡು ದಿನಗಳಿಂದ ಬೆಂಗಳೂರಿನಲ್ಲೇ ಇದ್ದು, ದೆಹಲಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಏನೂ ಗೊತ್ತಿಲ್ಲ ಎಂದರು. ಒಂದು ವೇಳೆ ಹೈಕಮಾಂಡ್ ಸಚಿವ ಸ್ಥಾನದ ಜವಾಬ್ದಾರಿ ವಹಿಸಿದರೆ ನಿರ್ವಹಿಸುತ್ತೀರಾ ಎಂಬ ಪ್ರಶ್ನೆಗೆ ನಗುವನ್ನೇ ಉತ್ತರವನ್ನಾಗಿಸಿದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಸೋಲಿಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸಮಿತಿಯೊಂದನ್ನು ನೇಮಕ ಮಾಡಿದ್ದಾರೆ. ಸಮಿತಿ ಸೋಲಿಗೆ ಕಾರಣಗಳನ್ನು ಪತ್ತೆ ಹಚ್ಚಲಿದೆ ಎಂದರು. ಹಲವು ಪಕ್ಷಗಳು ಯುಪಿಎಗೆ ಬೇಷರತ್ ಬೆಂಬಲ ನೀಡಿದೆ. ಅದರಲ್ಲಿ ಜೆಡಿಎಸ್ ಕೂಡಾ ಸೇರಿದೆ. ಅದಕ್ಕಿಂತ ಹೆಚ್ಚಿನದ್ದೇನೂ ಇಲ್ಲ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಣ್ಗಾವಲು: ಶಿಕ್ಷಣ ಇಲಾಖೆಗೂ 'ಸಿಸಿ ಟಿವಿ'
ರಾಜ್ಯದ ದೆಹಲಿ ಪ್ರತಿನಿಧಿಯಾಗಿ ಧನಂಜಯಕುಮಾರ್ ನೇಮಕ
ಸರ್ಕಾರ ಉರುಳಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
ಮರ ಕಡಿಯಲು ಅನುಮತಿ ಕೇಳಿ: ಹೈಕೋರ್ಟ್
ಸಂಪುಟ ಪುನಾರಚನೆ ಇಲ್ಲ: ಬಿ.ಎಸ್. ಯಡಿಯೂರಪ್ಪ
ಯಡಿಯೂರಪ್ಪ-ಈಶ್ವರಪ್ಪ ನಡುವೆ ವೈಮನಸ್ಸು?