ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಂಗ್ಲ ಮಾಧ್ಯಮಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೊರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಂಗ್ಲ ಮಾಧ್ಯಮಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೊರೆ
ರಾಜ್ಯದಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡದ ಕಾರಣ ನ್ಯಾಯಾಲಯವೇ ಅನುಮತಿ ನೀಡುವಂತೆ ಕೋರಿ ಖಾಸಗಿ ಆಡಳಿತ ಮಂಡಳಿಗಳು ಹೈಕೋರ್ಟ್ ಮೆಟ್ಟಿಲೇರಿವೆ.

ಭಾಷಾ ಮಾಧ್ಯಮದ ಹೆಸರಿನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನಿರಾಕರಿಸುವಂತಿಲ್ಲ ಎಂಬ ಹೈಕೋರ್ಟ್ ಆದೇಶವಿದ್ದರೂ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಅನುಮತಿ ನಿರಾಕರಿಸಿದೆ. ಆದ್ದರಿಂದ ಹೈಕೋರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಅನುಮತಿ ನೀಡಬೇಕೆಂದು ಕೋರಿವೆ.

ಈ ಕುರಿತು ಖಾಸಗಿ ಆಡಳಿತ ಮಂಡಳಿಗಳು ಹೈಕೋರ್ಟ್‌ನಲ್ಲಿ ಮಧ್ಯಂತರ ಕೋರಿಕೆ ಸಲ್ಲಿಸಿವೆ. 2008ರ ಜುಲೈ 2ರಂದು ಸರ್ಕಾರದ ಭಾಷಾ ಮಾಧ್ಯಮ ನೀತಿಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ಈ ತೀರ್ಪಿನಂತೆ ಆಂಗ್ಲ ಮಾಧ್ಯಮ ಶಾಲೆಗಳಿಗೆ ಆಡಳಿತ ಮಂಡಳಿಗಳು ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವಂತೆ ಹೈಕೋರ್ಟ್ 2009ರ ಏಪ್ರಿಲ್ 6ರಂದು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಹೈಕೋರ್ಟ್ ನೀಡಿದ ಗಡುವು ಮೇ 16ಕ್ಕೆ ಮುಗಿದಿದೆ. ಆದರೂ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನ್ಯಾಯಾಲಯವೇ ಮಧ್ಯಪ್ರವೇಶಿಸಿ ಆಂಗ್ಲಮಾಧ್ಯಮ ಶಾಲೆಗಳಿಗೆ ಅನುಮತಿ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಪುಟದಲ್ಲಿ ಖರ್ಗೆ, ಮುನಿಯಪ್ಪ, ಆಸ್ಕರ್ ?
ರಾಜ್ಯಕ್ಕೆ ಈವರೆಗೂ ಕ್ಯಾಬಿನೆಟ್ ದರ್ಜೆ ಸಿಕ್ಕಿಲ್ಲ: ಕೃಷ್ಣ
ಕಣ್ಗಾವಲು: ಶಿಕ್ಷಣ ಇಲಾಖೆಗೂ 'ಸಿಸಿ ಟಿವಿ'
ರಾಜ್ಯದ ದೆಹಲಿ ಪ್ರತಿನಿಧಿಯಾಗಿ ಧನಂಜಯಕುಮಾರ್ ನೇಮಕ
ಸರ್ಕಾರ ಉರುಳಿಸಲು ಸಾಧ್ಯವಿಲ್ಲ: ಯಡಿಯೂರಪ್ಪ
ಮರ ಕಡಿಯಲು ಅನುಮತಿ ಕೇಳಿ: ಹೈಕೋರ್ಟ್