ರಾಜ್ಯ ಸರ್ಕಾರ 4928 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಜೂನ್ 15ರೊಳಗೆ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಕನ್ನಡ ವಿಷಯದಲ್ಲಿ 4406, ಉರ್ದು 385, ಮರಾಠಿ 129, ತಮಿಳುಭಾಷೆಯಲ್ಲಿ ಎರಡು ಹಾಗೂ ತೆಲುಗು ಭಾಷೆಯಲ್ಲಿ ಆರು ಶಿಕ್ಷಕರ ಹುದ್ದೆ ಸೇರಿದಂತೆ ಒಟ್ಟು 4928 ಹುದ್ದೆಗಳಿಗೆ ನೇಮಕಾತಿ ಪ್ರಾಧಿಕಾರದ ನಿಯಮಾನುಸಾರ ನೇಮಕಾತಿ ನಡೆಯಲಿದೆ. ಅಕ್ಟೋಬರ್-ನವೆಂಬರ್ ಒಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದರು.
65ಸುವರ್ಣ ಗ್ರಾಮ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ 65ಗ್ರಾಮಗಳು ಆಯ್ಕೆಯಾಗಿದ್ದು, ಜಿಲ್ಲೆಗೆ 27.80ಕೋಟಿ ರೂ.ಅನದಾನ ಲಭ್ಯವಾಗಲಿದೆ. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದರು. |