| ಯಡಿಯೂರಪ್ಪನ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ | | | ಬೆಂಗಳೂರು , ಗುರುವಾರ, 4 ಜೂನ್ 2009( 12:51 IST ) | | | |
| | |
| ಸುಳ್ಳಿನ ಸರದಾರನಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಪಾಪದ ಕೊಡ ತುಂಬಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ, ರಾಜ್ಯದಲ್ಲಿನ ಆಡಳಿತಾರೂಢ ಬಿಜೆಪಿ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಪಕ್ಷದ ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದು ಸೂಕ್ತ ಎಂದು ಹೇಳಿದರು.ಮುಖ್ಯಮಂತ್ರಿ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಗೌರವ ಕಾಪಾಡಲಿ. ಬಿಜೆಪಿ ನಡೆಸಿದ ಆಪರೇಷನ್ ಕಮಲವೇ ಈಗ ಆ ಪಕ್ಷಕ್ಕೆ ಮುಳುವಾಗಿದೆ. ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ವಿದ್ಯಮಾನಗಳು ಇದಕ್ಕೆ ಸಾಕ್ಷಿ. ಇದರ ಪರಿಣಾಮ ಏನೆಂದರೆ, ಯಡಿಯೂರಪ್ಪನವರು ಅಧಿಕಾರದ ಗದ್ದುಗೆಯನ್ನು ಕಳೆದುಕೊಳ್ಳುವುದು ನಿಶ್ಚಿತ ಎಂದರು.ಯಡಿಯೂರಪ್ಪನವರೇ ನಮ್ಮ ಪ್ರಶ್ನಾತೀತ ನಾಯಕರು ಎಂದೆನ್ನುತ್ತಿದ್ದ ಬಿಜೆಪಿ ಪ್ರಮುಖ ಮುಖಂಡರೇ ಇದೀಗ ಸಿಎಂ ವಿರುದ್ಧ ತಿರುಗಿ ಬಿದ್ದಿದ್ದಾರೆ. ಭಿನ್ನಮತ ಶಮನಕ್ಕಾಗಿ ಬಿಜೆಪಿ ಹರಸಾಹಸ ಪಡುತ್ತಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು. |
| |
| | |
| | | |
|
| | |
|
|
| | |
|
|
| |
|  | |