ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಜನರಿಗಾಗಿ ಪ್ರಾಣ ಕೊಡಲು ಸಿದ್ದ': ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಜನರಿಗಾಗಿ ಪ್ರಾಣ ಕೊಡಲು ಸಿದ್ದ': ಯಡಿಯೂರಪ್ಪ
'ಕಾಲೆಳೆಯುವವರು ಇದ್ದೇ ಇರುತ್ತಾರೆ. ಅದಕ್ಕೆಲ್ಲ ಅಂಜುವುದಿಲ್ಲ. ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ. ಆದರೆ ಪ್ರಗತಿ ಕಾರ್ಯಕ್ಕೆ ಹಿನ್ನೆಡೆ ಉಂಟು ಮಾಡುವ ಅಧಿಕಾರಿಗಳನ್ನು ಮಾತ್ರ ಕ್ಷಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ನಂತರ ನಗರದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ವಿಕಾಸ ಸಂಕಲ್ಪ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸದಾ ಕಾಲೆಳೆಯುವವರು ಇದ್ದೇ ಇರುತ್ತಾರೆ. ಇಂತಹ ವಿಚಾರಗಳಿಗೆ ಗಮನ ಕೊಡದೆ ದೇಶದಲ್ಲೇ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಅಧಿಕಾರ ಶಾಶ್ವತವಲ್ಲ. ಜನರಿಗಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ. ಅಧಿಕಾರಿಗಳ ಕಾರ್ಯವೈಖರಿಯನ್ನು ಒಂದು ವರ್ಷ ಕಾಲ ನೋಡಿಯಾಗಿದೆ. ಇನ್ನು ಮುಂದೆಯೂ ಅಭಿವೃದ್ಧಿಗೆ ಹಿನ್ನೆಡೆ ಮಾಡಿದರೆ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡವರಿಗೆ ನಿರೀಕ್ಷಿತ ಮಟ್ಟದಲ್ಲಿ ಮನೆಗಳನ್ನು ನಿರ್ಮಿಸಿಕೊಡಲು ಆಗಲಿಲ್ಲ. ಗ್ರಾಮ ಪಂಚಾಯ್ತಿಗಳು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿಕೊಡಲು ಆರೇಳು ತಿಂಗಳು ವಿಳಂಬ ಮಾಡಿವೆ. ಪಟ್ಟಿ ನೀಡುವುದು ಇನ್ನೂ ತಡವಾದರೆ, ಚುನಾಯಿತ ಪ್ರತಿನಿಧಿಗಳು ಆಸಕ್ತಿ ತೋರದಿದ್ದರೆ ಅಧಿಕಾರಿಗಳೇ ಪಟ್ಟಿ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರೊ.ಅ.ರಾ.ಮಿತ್ರ-ಬೀಳಗಿ ಸೇರಿ ಐವರಿಗೆ ಅಕಾಡೆಮಿ ಪ್ರಶಸ್ತಿ
ಯಡಿಯೂರಪ್ಪ ನಿವಾಸದ ಮುಂದೆ ಧರಣಿ: ಜೆಡಿಎಸ್
'ಕೆಲವು ಮಂತ್ರಿಗಳಿಗೆ ಲಗಾಮು ಹಾಕ್ಬೇಕು: ಬೇಳೂರು
ಲೋಕಾಯುಕ್ತ ನ್ಯಾ.ಹೆಗ್ಡೆ ವಿರುದ್ಧ ಮಾನನಷ್ಟ ದಾವೆ
'ಉಸ್ತುವಾರಿ ಸಚಿವಗಿರಿಯಿಂದ ಮುಕ್ತಿಗೊಳಿಸಿ': ಶೋಭಾ
ಭಿನ್ನಮತ ಇಲ್ಲ;ಇದೆಲ್ಲಾ ಮಾಧ್ಯಮಗಳ ಸೃಷ್ಟಿ: ರೆಡ್ಡಿ