ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಆರಂಭವಾದ ಸಾರ್ವಜನಿಕರ ಅಹವಾಲನ್ನು ಆಲಿಸುವ ಜನತಾ ದರ್ಶನ ಮಾದರಿ ಕಾರ್ಯಕ್ರಮವನ್ನು ಶೀಘ್ರವಾಗಿ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ವಾರದಲ್ಲಿ ನಾಲ್ಕು ದಿನ ವಿಧಾನಸೌಧದಲ್ಲಿ ಕುಳಿತು ಜನರ ಕಷ್ಟಗಳನ್ನು ಆಲಿಸಿ, ವಾರದ ಎರಡು ದಿನ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.
ರಾಜ್ಯದ ಜನತೆಯ ಅಹವಾಲನ್ನು ಸ್ವೀಕರಿಸಿ ಅವರ ಕಷ್ಟಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗೆ ನಿಗದಿತ ದಿನದಂದು ತಮ್ಮ ಗೃಹ ಕಚೇರಿಯಾದ ಕೃಷ್ಣಾದಲ್ಲಿ ಜನತಾ ದರ್ಶನ ಮಾದರಿಯಲ್ಲಿ ಜನರು ತಮ್ಮನ್ನು ಭೇಟಿ ಮಾಡಬಹುದಾಗಿದೆ ಎಂದು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ನಡೆಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. |