ಬಡವರ ಹೊಟ್ಟೆ ಮೇಲೆ ಹೊಡೆದು ನ್ಯಾಯಬೆಲೆ ಅಂಗಡಿಯಲ್ಲಿ ಏನಾದರು ಅವ್ಯವಹಾರ ನಡೆಸುತ್ತಿದ್ದದ್ದು ತಿಳಿದು ಬಂದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ನ್ಯಾಯ ಬೆಲೆ ಅಂಗಡಿಯ ಪರವಾನಿಗೆಯನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಡಿತರ ಚೀಟಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರಿಗಾಗಿ ನ್ಯಾಯ ಬೆಲೆ ಆಂಗಡಿಗಳ ಯೋಜನೆಯನ್ನು ಮಾಡಲಾಗಿದೆ. ಅವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುವ ಕಾರ್ಯಕ್ಕೆ ಮುಂದಾದರೆ ಸಹಿಸುವುದಿಲ್ಲ.
ಈ ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚ ಪಡೆಯುವುದಾಗಲಿ, ಅನ್ಯಾಯ ಮಾಡುವುದಾಗಲಿ ಕಂಡುಬಂದರೆ ಹಿಂದು ಮುಂದು ನೋಡದೆ ಅಂಥ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಹೇಳಿದ್ದಾರೆ.
ಈಗಾಗಲೇ ಅವ್ಯವಹಾರದಲ್ಲಿ ತೊಡಗಿದ್ದ 87 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು, 31 ಅಧಿಕಾರಿಗಳಿಗೆ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದರು. |