ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜೀವವೈವಿಧ್ಯ ಸಂರಕ್ಷಣೆಗೆ ಅಗತ್ಯವಾದ ಆರ್ಥಿಕ ನೆರವು ಕಲ್ಪಿಸಬೇಕು, ವಿವಿಧ ಯೋಜನೆಗಳಿಗೆ ಆದಷ್ಟು ಬೇಗ ಮಂಜೂರಾತಿ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಅರಣ್ಯ ಖಾತೆ ರಾಜ್ಯ ಸಚಿವರಾದ ಜೈರಾಂ ರಮೇಶ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ನಗರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರ ಜೊತೆ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ರಾಜ್ಯದ ವಿವಿಧ ಯೋಜನೆಗಳಿಗೆ ಶೀಘ್ರ ಮಂಜೂರಾತಿ ನೀಡಬೇಕು. ಈ ಮೂಲಕ ರಾಜ್ಯದ ಅಭಿವೃದ್ದಿ ಯೋಜನೆಗಳು ಮತ್ತು ಪರಿಸರ ಸಂರಕ್ಷಣೆ ಪ್ರಯತ್ನಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯದ ಬಿಳಿಗಿರಿರಂಗನ ಬೆಟ್ಟದ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವದ ಸರಹದ್ದುಗಳನ್ನು ಸಂರಕ್ಷಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ನೀಡಬೇಕು. ಪರಿಸರ ರಕ್ಷಣೆ ಮತ್ತು ಅಭಿವೃದ್ದಿ ಎರಡನ್ನೂ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗೆ ಅಗತ್ಯ ಪ್ರಮಾಣದಲ್ಲಿ ಆರ್ಥಿಕ ನೆರವು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಕೋರಿಕೆ ಸಲ್ಲಿಸಿದರು.
ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಅಭಿವೃದ್ದಿಗೆ 700 ಕೋಟಿ ರೂ. ಬಿಡು ಮಾಡುವುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ. |