ಸಾದರ ಲಿಂಗಾಯಿತ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಜಾತಿ ಪ್ರಮಾಣ ಪತ್ರ ನೀಡುವಂತೆ ಸೂಚಿಸಿ ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ಸಮಾಜ ಕಲ್ಯಾಣ ಇಲಾಖೆ ಗುರುವಾರ ಹಿಂದಕ್ಕೆ ಪಡೆದಿದೆ. ಈ ಆದೇಶ ಹೊರಡಿಸಿದ್ದ ಅಧಿಕಾರವನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಈ ಕುರಿತು ಪ್ರತ್ಯೇಕ ಆದೇಶವೊಂದನ್ನು ಹೊರಡಿಸಿರುವ ಇಲಾಖೆ, ಮೇ 6ರ ಆದೇಶವನ್ನು ವಾಪಸು ಪಡೆಯಲಾಗಿದೆ. ವಿಷಯವನ್ನು ಇಲಾಖೆಯ ಕಾರ್ಯದರ್ಶಿಯ ಗಮನಕ್ಕೆ ತಾರದೇ ಕೆಳಹಂತದ ಅಧಿಕಾರಿಗಳೇ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಗೊಂದಲ ಉಂಟಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಗೊಂದಲಕ್ಕೆ ಕಾರಣವಾದ ಆದೇಶ ಹೊರಡಿಸಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಸುಬ್ಬಯ್ಯ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಇಲಾಖೆಯ ಜಂಟಿ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2002ರ ಮಾರ್ಚ್ 2ರಂದು ಪ್ರಕಟಿಸಿರುವ ಅಧಿಸೂಚನೆಯಲ್ಲಿರುವ ಪ್ರವರ್ಗ 2ಎ ಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನೂ ಅಂಗೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದೆ. |