ಬಳ್ಳಾರಿಯ ಗಣಿಕುಳಗಳಾದ ಸಚಿವರಾದ ರೆಡ್ಡಿ ಸಹೋದರರು ಭಿನ್ನಮತ ಹುಟ್ಟು ಹಾಕುತ್ತಿರುವುದು ಸರಿಯಲ್ಲ. ಭಿನ್ನಮತ ಸಾರ್ವತ್ರಿಕವಾಗಿ ಚರ್ಚಿಸುವಂತಹ ವಿಷಯವೂ ಅಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದ್ದಾರೆ.
ಹಂಪಿ ಕನ್ನಡ ವಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ವಿರುದ್ಧ ಶಾಸಕ, ಸಚಿವರಿಗೆ ಅಸಮಾಧಾನ ಇದ್ದರೆ, ಶಾಸಕಾಂಗ ಸಭೆಯಲ್ಲಿ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅದು ಬಿಟ್ಟು ಹೀಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು. |