ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಟಿಎಂಎ ಪೈ ಅಂತಾರಾಷ್ಟ್ರೀಯ ಕನ್ವೆಶನ್ ಸೆಂಟರ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ವಿಕಾಸ ಸಂಕಲ್ಪ ಉತ್ಸವದಲ್ಲಿ ಪಾಲ್ಗೊಳ್ಳಲೆಂದು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಬಿಜೆಪಿ ನಾಯಕರ ನಡುವೆ ಸ್ವಲ್ಪ ಮಟ್ಟಿನ ಸೌಹಾರ್ದದ ಕೊರತೆ ಇದೆ ಎನ್ನುವುದನ್ನು ಒಪ್ಪಿಕೊಂಡರು. ಪಕ್ಷದ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ನಿನ್ನೆ ಬೆಂಗಳೂರಿಗೆ ಆಗಮಿಸಿದ್ದು, ಈ ಕೊರತೆ ನೀಗಿದೆ. ಸರ್ಕಾರವೂ ಇನ್ನಷ್ಟು ಬಲಿಷ್ಠಗೊಂಡು ತನ್ನ ಅಧಿಕಾರಾವಧಿಯನ್ನು ಸುಗಮವಾಗಿ ಸಂಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. |