ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯದೆ ರಚನಾತ್ಮಕ ಪ್ರತಿಪಕ್ಷವಾಗಿ ಜೆಡಿಎಸ್ ಕೆಲಸ ನಿರ್ವಹಿಸಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ರೇವಣ್ಣ ಭರವಸೆ ನೀಡಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಗೊಂಡ ನಂತರ ವಿಧಾನಸೌಧದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದ ಅವರು ಪಕ್ಷದ ಎಲ್ಲ ಶಾಸಕರು ತಮಗೆ ಉತ್ತಮ ಸಹಕಾರ ನೀಡುವ ಭರವಸೆ ಇದೆ ಎಂದು ಹೇಳಿದ್ದಾರೆ.
ತಾವು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾದ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಘರ್ಷ ಬೇಡ ಅಭಿವೃದ್ಧಿ ಪರ ಕೆಲಸ ಮಾಡೋಣ ಎಂದು ಸಂದೇಶ ಕಳುಹಿಸಿ ಕೋರಿಕೊಂಡಿದ್ದಾರೆ ಎಂದರು.
5 ಕೋಟಿ ಜನತೆಯ ಪ್ರತಿನಿಧಿಯಾಗಿ ಅವರು ಕೋರಿರುವ ಸಂದೇಶವನ್ನು ಪರಿಗಣಿಸಿದ್ದು, ಪಕ್ಷ ಯಾವುದೇ ಸಂಘರ್ಷಕ್ಕೆ ಇಳಿಯದೆ ಅಭಿವೃದ್ದಿ ದೃಷ್ಠಿಯಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದು, ಇನ್ನು ನಾಲ್ಕು ವರ್ಷ ಕಾಲ ಉತ್ತಮ ಅಭಿವೃದ್ದಿ ಕೆಲಸ ಮಾಡಲು ನಮ್ಮ ಪಕ್ಷ ಸಂಪೂರ್ಣ ಸಹಕಾರ ನೀಡಲಿದೆ ಎಂದರು. |