ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಸದ್ಯವೇ ಪತನವಾಗಲಿದೆ ಎಂಬುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡುತ್ತಿದ್ದ ಅವರು ಬಿಜೆಪಿ ಪಕ್ಷದೊಳಗೆ ಒಡಕು ಮೂಡಿದ್ದು, ಕೇಂದ್ರ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರು ಮಾಡಿರುವ ಸಂಧಾನ ಫಲಪ್ರದವಾಗಿಲ್ಲ ಎಂದು ಹೇಳಿದ್ದಾರೆ.
ರೆಡ್ಡಿ ಸಹೋದರರು ಹಾಗೂ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ಬಂಡಾಯ ಎದ್ದಿದ್ದು, ಸರ್ಕಾರದ ತಿರುಗಿ ಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ. |