ಶೀಘ್ರದಲ್ಲೇ ವಿದ್ಯುತ್ ದರವನ್ನು ಏರಿಕೆ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಮುನ್ಸೂಚನೆ ನೀಡುವ ಮೂಲಕ ವಿದ್ಯುತ್ ಬಳಕೆದಾರರಿಗೆ 'ಶಾಕ್' ನೀಡಿದ್ದಾರೆ!
ಮುಂದಿನ ದಿನಗಳಲ್ಲಿ ವಿದ್ಯುತ್ ದರವನ್ನು ಏರಿಸುವ ಕುರಿತಂತೆ ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೇ ಬೆಂಗಳೂರು ಸೇರಿದಂತೆ ರಾಜ್ಯ ಎಲ್ಲ ಪ್ರಮುಖ ನಗರಗಳ ವಾಣಿಜ್ಯ ಕಟ್ಟಡಗಳಿಗೆ ಸೋಲಾರ್ ವಿದ್ಯುತ್ ಕಡ್ಡಾಗೊಳಿಸುವ ನಿಟ್ಟಿನಲ್ಲಿ ಕಾಯ್ದೆಯೊಂದನ್ನು ಜಾರಿಗೆ ತರಲು ಯೋಜಿಸಲಾಗುತ್ತಿದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಮುಂಬರುವ ದಿನಗಳಲ್ಲಿ ಕಟ್ಟಲಾಗುವ ಕಟ್ಟಡಗಳಿಗೆ ಸೋಲಾರ್ ವಿದ್ಯುತ್ ಬಳಕೆ ಕಡ್ಡಾಯಗೊಳಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. |