ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಸಿಎಂ ಕುಟುಂಬ ಹಸ್ತಕ್ಷೇಪ ಮಾಡುತ್ತಿದೆ ಎಂಬ ಶಾಸಕ ವರ್ತೂರ್ ಪ್ರಕಾಶ್ ಅವರ ಆರೋಪವನ್ನು ಸಂಸದ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅಲ್ಲಗಳೆದಿದ್ದಾರೆ.
ತಮ್ಮ ಕುಟುಂಬ ಸರ್ಕಾರದ ಆಡಳಿತದ ವಿಷಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ. ಈ ರೀತಿಯ ಆರೋಪಗಳು ಸತ್ಯಕ್ಕೆ ದೂರವಾದವುಗಳು. ಅಭಿವೃದ್ಧಿಯ ವಿಷಯದಲ್ಲಿ ಸರ್ಕಾರದೊಂದಿಗೆ ತಾವು ಸಂಪರ್ಕ ಇಟ್ಟುಕೊಂಡಿರುವುದಾಗಿ ಹೇಳಿದರು.
ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನೂತನ ಸಂಸದರ ಕಚೇರಿ ಉದ್ಘಾಟಿಸಿದ ನಂತರ ಅವರು ಮಾತನಾಡಿದರು.
ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರಾಘವೇಂದ್ರ ಅವರು ನಿರಾಕರಿಸಿದರು. ತಮ್ಮ ತಂದೆ ಕುಟುಂಬ ರಾಜಕಾರಣ ಮಾಡುತ್ತಿಲ್ಲ. ತಾವು ಕಳೆದ ಹದಿನೈದು ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ್ದೇನೆ ಎಂದರು. |