ತ್ಯಾಜ್ಯ ವಿಲೇವಾರಿ ಘಟಕವಿಲ್ಲದ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ಬೌರಿಂಗ್, ಕೆ.ಸಿ. ಜನರಲ್ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ 9 ಆಸ್ಪತ್ರೆಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ನಿಗದಿತ ಗಡುವಿನಲ್ಲಿ ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಗಳನ್ನು ನಿರ್ಮಿಸಿಕೊಳ್ಳುವಲ್ಲಿ ವಿಫಲವಾಗಿರುವ ನಗರದ ಒಂಬತ್ತು ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ತೀರ್ಮಾನಿಸಿದೆ.
ಈ ಸಂಬಂಧ ಆದೇಶ ಹೊರಡಿಸಿದ್ದು, ಆಸ್ಪತ್ರೆಗಳನ್ನು ಮುಚ್ಚುವ ಪ್ರಕ್ರಿಯೆ ಪೂರ್ಣಗೊಳಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೈಕೋರ್ಟ್ ಲೋಕ ಅದಾಲತ್‌ಗೆ ತಿಳಿಸಿದೆ.
15 ದಿನಗಳಲ್ಲಿ ಆಸ್ಪತ್ರೆಗಳನ್ನು ಮುಚ್ಚಿ ಅಲ್ಲಿರುವ ಒಳರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಯಾವುದೇ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಬಾರದು ಎಂದು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. |