ಮೈಸೂರು ಜಿಲ್ಲಾ ಉಸ್ತುವಾರಿಯ ಹೊಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಇದೀಗ ತಮ್ಮ ರಾಗ ಬದಲಿಸಿದ್ದಾರೆ.ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ನೀಡುವಂತೆ ಈ ಮೊದಲು ತಾವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದು ನಿಜ. ಈ ನಿಟ್ಟಿನಲ್ಲಿ ಈ ಹೊಣೆಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಸ್ಪಷ್ಟಪಡಿಸಿದ್ದಾರೆ.ಅಲ್ಲದೆ, ಮೈಸೂರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ತಜ್ಞರ ಜತೆ ಚರ್ಚಿಸಿರುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದಲ್ಲದೆ, ಟೀಕೆಗಳಿಗೆ ನನ್ನ ಕೆಲಸವೇ ಉತ್ತರ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ವಿಭಾಗದ ಮಟ್ಟದ ಸರ್ಕಾರದ ವಿಕಾಸ ಸಂಕಲ್ಪ ಉತ್ಸವದ ಸಭೆಯಲ್ಲಿ ಬಹಿರಂಗವಾಗಿಯೇ ಸಚಿವೆ ಶೋಭಾ ಕರಂದ್ಲಾಜೆ, ತನ್ನನ್ನು ಉಸ್ತುವಾರಿ ಸಚಿವಗಿರಿ ಹೊಣೆಯಿಂದ ಮುಕ್ತಗೊಳಿಸಿ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಂಡಿದ್ದರು. |