ಲೋಕಸಭಾ ಚುನಾವಣೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಬಿಜೆಪಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಶಾಸಕ ರೇಣುಕಾಚಾರ್ಯ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ. ಲೋಕಸಭಾ ಚುನಾವಣೆ ವೇಳೆ ಹಿಂದೂಗಳ ವಿರುದ್ಧ ಮಾತನಾಡುವವರ ತಲೆ ಕತ್ತರಿಸಬೇಕೆಂಬ ಪ್ರಚೋದನಕಾರಿ ಹೇಳಿಕೆ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿತ್ತು.
ಈ ಬಗ್ಗೆ ದಾವಣಗೆರೆ ಪೊಲೀಸರು ರೇಣುಕಾಚಾರ್ಯ ವಿರುದ್ಧ ಐಪಿಸಿ 502ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಆದರೆ ಶಾಸಕರು ಇದರ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು.
ಇದೇ ವೇಳೆ ಒಂದು ತಿಂಗಳಾದರೂ ಶಾಸಕರನ್ನು ಬಂಧಿಸುವಲ್ಲಿ ವಿಫಲವಾಗಿರುವ ಪೊಲೀಸರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಹೇಳಿಕೆ ದಾಖಲಿಸುವಂತೆ ರೇಣುಕಾಚಾರ್ಯಗೆ ನ್ಯಾಯಾಲಯವು ಸೂಚನೆ ನೀಡಿದೆ.
|