ತುಂಗಾಭದ್ರಾ ನದಿಯಲ್ಲಿ ಸೋಮವಾರ ನಡೆದ ತೆಪ್ಪ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಏಳು ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದ ಶವಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಈ ಘಟನೆಯಲ್ಲಿ 3 ಮಹಿಳೆಯರು, 2 ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಜಲಸಮಾಧಿಯಾಗಿದ್ದು, ಉಳಿದ ಶವಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೂಲಿಕಾರ್ಮಿಕರು ಮುಂಡರಗಿ ತಾಲೂಕಿನ ಮಾಗಳ ಗ್ರಾಮದಿಂದ ವಿಟ್ಲಾಪುರ ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ, ಸಾವನ್ನಪ್ಪಿದವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಈ ಘಟನೆಗೆ ಸಂಬಂಧಿಸಿದಂತೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |