ಲೋಕಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರಿಂದ ಇದೀಗ ವಿಶ್ರಾಂತಿಗೆ ಮೊರೆ ಹೋಗಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಜೂನ್ 30ರವರೆಗೆ ಮನೆ ಬಿಟ್ಟು ಹೊರ ಹೋಗದಿರಲು ನಿರ್ಧರಿಸಿದ್ದಾರೆಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಆಯುರ್ವೇದ ಚಿಕಿತ್ಸೆ ಪಡೆಯುತ್ತಿರುವ ಗೌಡರು ದೇಹದ ಮಸಾಜ್ ಸೇರಿದಂತೆ ವಿವಿಧ ಹಂತಗಳ ಆಯುರ್ವೇದ ಚಿಕಿತ್ಸೆಯನ್ನು ಮನೆಯಲ್ಲೇ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರಂತೆ. ಅಲ್ಲದೇ ಕೆಲ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಕೂಡ ಸೂಚಿಸಿದ್ದಾರೆ.
ಆ ನಿಟ್ಟಿನಲ್ಲಿ ಪೂರ್ವನಿಗದಿತ ಪ್ರವಾಸವನ್ನು ರದ್ದು ಮಾಡಲಾಗಿದೆ. ಪಕ್ಷ ಸಂಘಟಿಸುವ ನೆಲೆಯಲ್ಲಿ ಗೌಡರು ಹಾಸನ, ಗುಲ್ಬರ್ಗ, ರಾಯಚೂರು, ಕೊಪ್ಪಳ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜೂನ್ 24ರಿಂದ ಪ್ರವಾಸ ಕೈಗೊಳ್ಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. |