ಆಡಳಿತಕ್ಕೆ ಕಾಯಕಲ್ಪ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿ ಬಜೆಟ್ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಮತ್ತು ಭಿನ್ನಮತ ಶಮನಕ್ಕಾಗಿ ಸಚಿವರು ,ಅಧಿಕಾರಿಗಳ ಜೊತೆ ಮಂಗಳವಾರದಿಂದ ಮೂರು ದಿನಗಳ ಕಾಲದ ಸಮಾಲೋಚನೆಗೆ ಚಾಲನೆ ನೀಡಿದ್ದಾರೆ.
ಪ್ರತಿದಿನ 11 ಸಚಿವರು ಹಾಗೂ ಅವರಿಗೆ ಸಂಬಂಧಿತ ಇಲಾಖಾ ಮುಖ್ಯಸ್ಥರೊಡನೆ ಆಯಾ ಇಲಾಖೆಗಳ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಈ ಸಭೆಯಲ್ಲಿ ನಡೆಯಲಿದೆ. ಅಲ್ಲದೇ ಮುನಿಸಿಕೊಂಡಿರುವ ಸಚಿವರಿಗೆ ಉಪಶಮನ ನೀಡಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.
ಬಜೆಟ್ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಜೆಟ್ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇರುವ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಚಿವರು ಹಾಗೂ ಅಧಿಕಾರಿಗಳು ತಮ್ಮ ಕಾರ್ಯಶೈಲಿ ಹಾಗೂ ಆಡಳಿತ ವೈಖರಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳುವ ಅಗತ್ಯತೆಯ ಬಗ್ಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಕೆಲ ಸೂಚನೆಗಳನ್ನು ನೀಡಲಿದ್ದಾರೆ.
ಇಂದು ಕೃಷಿ, ನೀರಾವರಿ, ಪಶುಸಂಗೋಪನೆ, ಸಣ್ಣ ಕೈಗಾರಿಕೆ ಮತ್ತು ರೇಷ್ಮೆ, ಸಹಕಾರ , ತೋಟಗಾರಿಕೆ ಮತ್ತು ಮೀನುಗಾರಿಕೆ, ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಎಪಿಎಂಸಿ, ಸಚಿವರುಗಳು, ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
|