ಮಾಜಿ ಸಚಿವ ದಿವಾಕರ ಬಾಬು ಅವರು ತಮ್ಮ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿರುವ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ, 'ಬಾಬು ಅವರದ್ದು ಕೊಲೆಗಡುಕ ಕುಟುಂಬ' ಎಂದು ಗಂಭೀರವಾಗಿ ಆರೋಪಿಸಿದರು.
ಕಾಂಗ್ರೆಸ್ನ ಹಿರಿಯ ಮುಖಂಡರಾಗಿರುವ ಬಾಬು ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ ಉಪವಾಸ ಸತ್ಯಾಗ್ರಹ ರಾಜಕೀಯ ಲಾಭ ಪಡೆಯುವ ಹುನ್ನಾರ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆದಿರುವ ಸಚಿವರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಲ್ಲಿ ತಾವು ಭಾಗಿಯಾಗಿಲ್ಲ. ಅಲ್ಲದೇ ದಿವಾಕರ ಬಾಬು ಅವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಇದಕ್ಕಾಗಿ ಕೇಂದ್ರ ಸರ್ಕಾರ ಮಾಡುವ ಜಂಟಿ ಸಮೀಕ್ಷೆ ತಾವು ಬದ್ಧ ಎಂದು ಸವಾಲು ಹಾಕಿದರು. |