ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಆಗಿಲ್ಲದಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಗವಂತ ನಮ್ಮ ಕೈ ಬಿಡಲ್ಲ, ದೇವರ ಮೇಲೆ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗದೇ ಜಲಾಶಯಗಳಲ್ಲಿ ನೀರು ಕಡಿಮೆಯಾಗಿದೆ. ಇದು ಕೃಷಿ ಹಾಗೂ ವಿದ್ಯುತ್ ವಲಯಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂದರು.ಕಳೆದ ಬಾರಿ ಆರಂಭದಲ್ಲಿ ಇಂತಹ ಸಮಸ್ಯೆಗಳು ಉದ್ಭವವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಈ ಸಮಸ್ಯೆಗಳೆಲ್ಲಾ ತಾನೇ ತಾನಾಗಿ ಪರಿಹಾರವಾಗುತ್ತದೆ ಎಂದು ಹೇಳಿದರು. ಒಂದು ವೇಳೆ ರಾಜ್ಯದಲ್ಲಿ ಮಳೆಯಾಗದಿದ್ದರೆ ಕೃಷಿ ಹಾಗೂ ವಿದ್ಯುತ್ ವಲಯಗಳ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ಈಗಿನಿಂದಲೇ ಚಿಂತನೆ ನಡೆಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು. |