ರಾಜ್ಯದಲ್ಲಿ ಸಕಾಲಿಕ ಮಳೆ ಆಗಿ ಜನತೆ ಸುಖ-ಶಾಂತಿ ನೆಮ್ಮದಿಯಾಗಿರುವಂತೆ ಎಲ್ಲಾ ಸ್ವಾಮೀಜಿಗಳು ಆಶೀರ್ವಚನ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ನಡೆಯುತ್ತಿರುವ ಜೈನ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿ.ವೀರೇಂದ್ರ ಹೆಗ್ಗಡೆ ಹಾಗೂ ಆದಿ ಚುಂಚನಗಿರಿ ಮಠಾಧ್ಯಕ್ಷ ಬಾಲಗಂಗಾಧರನಾಥ ಸ್ವಾಮೀಜಿಯವರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗಿ ಜಲಾಶಯಗಳು ತುಂಬಿ ವಿದ್ಯುತ್ ಸಮಸ್ಯೆ ದೂರವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಾಮೀಜಿಗಳ ಆಶೀರ್ವಚನ ಅಗತ್ಯ ಎಂದು ಹೇಳಿದರು. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು. |