ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ಮಾತನಾಡಿದ ಅವರು, ನೀರಿನ ಸಂಗ್ರಹ ಕಡಿಮೆ ಇರುವುದರಿಂದ ರಾಜ್ಯದ ಹಿತಕ್ಕೆ ಮಾರಕವಾಗುವಂತಹ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮುಂಗಾರು ಚುರುಕುಗೊಂಡು ಉತ್ತಮ ಮಳೆಯಾದರೆ ಎಂದಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದರು. ತಮಿಳುನಾಡಿನ ಪತ್ರ ಬಂದಿಲ್ಲ: ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಪತ್ರ ಬರೆದಿಲ್ಲ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಯಾವುದೇ ರೀತಿಯ ಪತ್ರ ಬಂದಿಲ್ಲ, ಪತ್ರ ಬಂದರೂ ಸದ್ಯದ ಸ್ಥಿತಿಯಲ್ಲಿ ನೀರು ಬಿಡುಗಡೆ ಅಸಾಧ್ಯ ಎಂದು ತಿಳಿಸಿದ್ದಾರೆ. |