ರಾಜ್ಯದ ಅಭಿವೃದ್ಧಿ ಯೋಜನೆಗಳ ಪ್ರಗತಿಯ ಪರಾಮರ್ಶೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚಿಂತನ-ಮಂಥನ ಸಭೆಯನ್ನು ಶುಕ್ರವಾರ ರಾತ್ರಿ ಮತ್ತು ನಾಳೆ ಬೆಳಿಗ್ಗೆ ತನಕ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಆಗಿರುವ ಪ್ರಗತಿ ಹಾಗೂ ಮುಂದೆ ಅಭಿವೃದ್ಧಿಯ ವೇಗ ಹೆಚ್ಚಿಸಲು ರೂಪಿಸಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ಈ ಎರಡು ದಿನದ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬಜೆಟ್ ಕಾರ್ಯಕ್ರಮಗಳ ಅನುಷ್ಠಾನ, ಅಭಿವೃದ್ಧಿ ಕಾರ್ಯಕ್ರಮ ತ್ವರಿತ ಜಾರಿ ಬಗ್ಗೆ ಮುಖ್ಯಮಂತ್ರಿಗಳು ಕಳೆದ ಮೂರು ದಿನಗಳಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರ ತಂಡಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ಇಂದು ಸಂಜೆ ಮತ್ತು ನಾಳೆ ಒಟ್ಟಾಗಿ ಎಲ್ಲಾ ಸಚಿವರು ಹಾಗೂ ಅವರ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಈ ರೆಸಾರ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಈ ಸಭೆ ಮುಗಿದ ನಂತರ ಶನಿವಾರ ರಾತ್ರಿ ಅಧಿಕಾರಿಗಳು ಹಾಗೂ ಸಚಿವರ ತಂಡ ನಗರಕ್ಕೆ ವಾಪಸ್ ಆಗಲಿದ್ದಾರೆ. ಕಳೆದ ವರ್ಷ ಈ ಚಿಂತನ-ಮಂಥನ ಸಭೆ ಬನ್ನೇರುಘಟ್ಟ ರಸ್ತೆಯ ಐಐಎಂನಲ್ಲಿ ನಡೆದಿದ್ದು, ಈ ಬಾರಿ ರೆಸಾರ್ಟ್‌ನಲ್ಲಿ ನಡೆಯುತ್ತದೆ. |