ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮುಜರಾಯಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರನ್ನ ನೇಮಕ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಈಗಾಗಲೇ ಹೊಂದಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನದ ಜೊತೆಗೆ ಹೊಸದಾಗಿ ರಚನೆಯಾಗಿರುವ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಈ ಮಂಡಳಿಯನ್ನು ರಚಿಸಲಾಗಿದೆ ಎಂದು ಹೇಳಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ವಿ,ಸೋಮಣ್ಣ ಅವರಿಗಾಗಿ ತಮ್ಮ ಸಚಿವ ಪದವಿಯನ್ನು ತ್ಯಾಗ ಮಾಡಿರುವ ಕೃಷ್ಣಯ್ಯ ಶೆಟ್ಟಿಯವರಿಗೆ ಇದೀಗ ಸರ್ಕಾರ ಸಂಪುಟ ದರ್ಜೆ ಸ್ಥಾನಮಾನದ ಹುದ್ದೆಯನ್ನು ನೀಡಿದೆ. |