ರಾಜ್ಯದಲ್ಲಿ ವರುಣನ ಕೃಪೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್‌ಶೆಡ್ಡಿಂಗ್ ಮುಂದುವರಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾದ 1,543 ಮೆಗಾ ವ್ಯಾಟ್ ಬರಬೇಕಿತ್ತು. ಆದರೆ, ಇದರ ಮೂರನೇ ಒಂದು ಭಾಗದಷ್ಟೂ ಬಂದಿರಲಿಲ್ಲ. ಈ ಮಾಡಲಾಗಿತ್ತು. ಈಗ ಸಮಸ್ಯೆ ಬಗೆಹರಿದಿದೆ ಎಂದರು.
ಅದೇನೇ ಇರಲಿ, ಸದ್ಯಕ್ಕೆ ವಿದ್ಯುತ್ ಬೇಡಿಕೆ ನಿಯಂತ್ರಿಸುವ ಬಗ್ಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಪ್ರಸ್ತುತ 95ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆಯಿದ್ದು, 105ಮಿಲಿಯನ್ ಯೂನಿಟ್ ಉತ್ಪಾದನೆ ಇದೆ. ವಿದ್ಯುತ್ ದರವನ್ನು ಕೆಇಆರ್‌ಸಿ ನಿರ್ಧರಿಸಲಿದೆ ಎಂದರು.
ಜಲಾಯಶಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಿರುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕಳೆದ ಬಾರಿ ಈ ಅವಧಿಯಲ್ಲಿ ಜಲಾಶಯಗಳ ಪ್ರಮಾಣ ಈಗಿರುವಷ್ಟೇ ಇತ್ತು. ನಂತರ ದಿನಗಳಲ್ಲಿ ಸಾಕಷ್ಟು ಮಳೆ ಬಂದು, ಸಮಸ್ಯೆ ನಿವಾರಣೆಯಾಯಿತು. ರಾಜ್ಯಾದ್ಯಂತ ಈಗ ಮಳೆಯಾಗುತ್ತಿದೆ. ವಿದ್ಯುತ್ ಸಮಸ್ಯೆ ಉಲ್ಬಣಿಸದು ಎಂದು ವಿಶ್ವಾಸ ವ್ಯಕ್ತಪಡಿಸಿದರು. |