ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ; ಬಿಡುಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ; ಬಿಡುಗಡೆ
Renukacharya
NRB
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರನ್ನು ಸೋಮನಾರ ದಾವಣಗೆರೆ ಕೆಟಿಜೆ ನಗರ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದಾರೆ.

ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಗೋಡು ತಿಮ್ಮಪ್ಪ ಅವರು, ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕತ್ತರಿಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು, ಅಲ್ಲದೇ ಚುನಾವಣಾ ಆಯೋಗ ಕಾಗೋಡು ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿತ್ತು.

ಕಾಗೋಡು ಹೇಳಿಕೆಗೆ ಪ್ರತಿಯಾಗಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು, ಹಿಂದೂಗಳ ವಿರುದ್ಧ ಮಾತನಾಡುವವರ 'ಕತ್ತು ಕತ್ತರಿಸಬೇಕೆಂದು' ತಿರುಗೇಟು ನೀಡಿದ್ದರು. ಈ ಬಗ್ಗೆ ಹೊನ್ನಾಳಿ ವಿರುದ್ಧ ದೂರು ಕೂಡ ದಾಖಲಾಗಿತ್ತು. ಆ ನಿಟ್ಟಿನಲ್ಲಿ ಇಂದು ದಾವಣಗೆರೆ ಪೊಲೀಸರು ಶಾಸಕ ಹೊನ್ನಾಳಿಯವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಅಲ್ಲದೇ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವನ್ನು ಮಾಡಬಾರದಾಗಿ ಎಚ್ಚರಿಕೆ ನೀಡಿದೆ.

ಪ್ರಚೋದನಕಾರಿ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಪೊಲೀಸರು ಐಪಿಸಿ 502ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಆದರೆ ಶಾಸಕರು ಸ್ಥಳೀಯ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು.ಅಲ್ಲದೇ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಇದೇ ವೇಳೆ ಒಂದು ತಿಂಗಳಾದರೂ ಶಾಸಕರನ್ನು ಬಂಧಿಸುವಲ್ಲಿ ವಿಫಲವಾಗಿರುವ ಪೊಲೀಸರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು, ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಹೇಳಿಕೆ ದಾಖಲಿಸುವಂತೆ ರೇಣುಕಾಚಾರ್ಯಗೆ ನ್ಯಾಯಾಲಯವು ಸೂಚನೆ ನೀಡಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೊಡಗು ಕರ್ನಾಟಕದ ಅವಿಭಾಜ್ಯ ಅಂಗ: ಯಡಿಯೂರಪ್ಪ
ತಮಿಳುನಾಡಿಗೆ ಸದ್ಯಕ್ಕೆ ನೀರಿಲ್ಲ: ಸಿಎಂ ಪುನರುಚ್ಚಾರ
ನೂತನ ಗವರ್ನರ್ ಭಾರದ್ವಾಜ್ ಇಂದು ಅಧಿಕಾರ ಸ್ವೀಕಾರ
ಜಾಫರ್ ಷರೀಫ್ ಅಂಗರಕ್ಷಕ ಗುಂಡು ಹೊಡೆದುಕೊಂಡು ಸಾವು
ಇಳೆಗೆ ಮಳೆ: ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್ ಇಲ್ಲ
ಸಂಘಪರಿವಾರಕ್ಕಾಗಿ ರೆಸಾರ್ಟ್‌ ಸಭೆ: ಡಿಕೆಶಿ