ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಜುಲೈ 10ರೊಳಗೆ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ನಗರ ಜಿಲ್ಲಾಧಿಕಾರಿ ಜಿ.ಎನ್. ನಾಯಕ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಸೂಚನೆಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಇಂದು ಕಡೆಯ ದಿನವಾಗಿದ್ದು, 1184 ಆಕ್ಷೇಪವುಳ್ಳ ಅರ್ಜಿಗಳು ಇದುವರೆಗೆ ಬಂದಿದ್ದು, ಇವುಗಳನ್ನೆಲ್ಲಾ ಬುಧವಾರ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಭೆ ನಡೆಸಿ ಆಕ್ಷೇಪವುಳ್ಳ ಅರ್ಜಿಗಳ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಈ ಬಗ್ಗೆ ಅಂತಿಮಗೊಂಡಿರುವ ಆಕ್ಷೇಪ ಅರ್ಜಿಗಳನ್ನು ಜುಲೈ 6ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿಯನ್ನು ಪರಿಶೀಲಿಸಿ ಜುಲೈ 10ರೊಳಗೆ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದರು.
ಅರ್ಜಿಗಳಲ್ಲಿ ವಾರ್ಡ್‌ಗಳ ಹೆಸರು ಬದಲಾವಣೆ, ಹೊಸದಾಗಿ ವಾರ್ಡ್ ಸೇರ್ಪಡೆ ಮಾಡುವುದು ಸೇರಿದಂತೆ ಹಲವು ಆಕ್ಷೇಪಗಳು ವ್ಯಕ್ತವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |