ಅಧಿಕಾರಿಗಳೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸಿರುವ ಸಭೆ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ವಿಧಾನಸಭೆ ಸ್ಪೀಕರ್ ಮಧ್ಯ ಪ್ರವೇಶಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿವಾದಿತ ಸುತ್ತೋಲೆಯನ್ನು ಹೊರಡಿಸುವ ಮೂಲಕ ಪ್ರತಿಪಕ್ಷ ನಾಯಕನ ಹುದ್ದೆಗೆ ಅಪಮಾನ ಮಾಡಿದೆ. ಇದನ್ನು ತಕ್ಷಣದಿಂದಲೇ ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪ್ರತಿಪಕ್ಷ ನಾಯಕರಾಗಿದ್ದಾಗ ನೀಡಿರುವ ಹೇಳಿಕೆಗಳನ್ನು ಜ್ಞಾಪಿಸಿಕೊಳ್ಳಲಿ. ಇಲ್ಲವಾದರೆ ಸಚಿವರಾದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರುಗಳಿಂದ ಕೇಳಿ ತಿಳಿದುಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.
ಒಂದು ವೇಳೆ ಪ್ರತಿಪಕ್ಷ ನಾಯಕನಾಗಿ ಇಂತಹ ಕಾರ್ಯಗಳನ್ನು ಮಾಡದಿದ್ದರೆ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂದೇ ಭಾವಿಸಬೇಕಾಗುತ್ತದೆ ಎಂದು ಹೇಳಿದರು. |