ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ರೀತಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕೂ ಕೌನ್ಸೆಲಿಂಗ್ ಪದ್ಧತಿ ಅಳವಡಿಸಲು ಉನ್ನತ ಶಿಕ್ಷಣ ಇಲಾಖೆ ತಿರ್ಮಾನಿಸಿದೆ.
ಈ ಸಂಬಂಧ ಈ ಪದ್ಧತಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದ್ದು, ಇದಕ್ಕಾಗಿ ಸ್ಪಷ್ಟ ರೂಪು ರೇಷೆ ಸಿದ್ಧಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಅಧ್ಯಕ್ಷತೆಯ ಸಮಿತಿ ರಚಿಸಲು ಅಂತರ್ ವಿಶ್ವವಿದ್ಯಾಲಯಗಳ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷನ ಸಚಿವ ಅರವಿಂದ ಲಿಂಬಾವಳಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ವಿದ್ಯಾರ್ಥಿಯೊಬ್ಬ 10 ಕಡೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಗಾಗಿಯೇ ಸಹಸ್ರಾರು ರೂಪಾಯಿ ವೆಚ್ಚ ಮಾಡಬೇಕು. ಇದಕ್ಕೆ ಕೌನ್ಸೆಲಿಂಗ್ ಪರಿಹಾರ ಎಂದು ತೀರ್ಮಾನಿಸಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಇದರ ಸ್ಪಷ್ಟ ನಿಯಮಾವಳಿ ರೂಪಿಸುವ ಹೊಣೆಯನ್ನು ವಿಟಿಯು ಕುಲಪತಿ ಎಚ್.ಪಿ. ಖಿಂಚಾ ಅಧ್ಯಕ್ಷತೆ ಸಮಿತಿಗೆ ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. |