ಪ್ರಕೃತಿ ಸೌಂದರ್ಯದ ಸೌಲಭ್ಯ ವಂಚಿತ ಕೊಡಗು ಜಿಲ್ಲೆಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ಕಲ್ಪಿಸಿಕೊಡುವ ಬಗ್ಗೆ ಕೇಂದ್ರ ಸರ್ಕಾರ ಕೊಡಗಿನ ಜನಮತ ಸಂಗ್ರಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಪ್ರತ್ಯೇಕ ರಾಜ್ಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡುವುದಿಲ್ಲ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಪ್ರತಿಕ್ರಿಯಿಸಿದ ಅವರು, ದೇಶದ ಇತರ ಭಾಗಗಳಿಗಿಂತ ವಿಭಿನ್ನ ಸಂಸ್ಕೃತಿ ಸಂಪ್ರದಾಯವನ್ನು ಹೊಂದಿರುವ ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಕೇಂದ್ರ ಬಯಸುವುದಾದರೆ ಮುಖ್ಯಮಂತ್ರಿಗಳೇಕೆ ಅಡ್ಡಿಯುಂಟು ಮಾಡುವುದು ಎಂದು ಪ್ರಶ್ನಿಸಿದ್ದಾರೆ.
ಕೊಡಗು ಪ್ರತ್ಯೇಕ ರಾಜ್ಯವಾಗಬೇಕೆ ಎಂಬ ಬಗ್ಗೆ ರಾಜ್ಯದ ಅನುಮತಿ ಕೇಳುವುದಕ್ಕಿಂತ ಕೇಂದ್ರ ಸರ್ಕಾರವೇ ಪ್ರಜಾಪ್ರಭುತ್ವದ ನಿಯಮಾನುಸಾರ ಕೊಡಗಿನ ಜನರ ಅಭಿಪ್ರಾಯ ಸಂಗ್ರಹಿಸಿ, ಅಂತಿಮ ತೀರ್ಮಾನ ಕೈಗೊಳ್ಳುವುದು ಉಚಿತ ಎಂದು ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದರು.
|