ತರೀಕೆರೆ-ಬೀರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಎರಡು ಕೆಎಸ್ಸಾರ್ಟಿಸಿ ಬಸ್‌ಗಳು ಇಂದು ಬೆಳಿಗ್ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬಸ್‌ನ ಚಾಲಕರಾದ ರವಿ ಹಾಗೂ ಸೋಮಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಮುರುಗೇಶ್, ಶ್ರೀನಿವಾಸ್ ಎಂಬಿಬ್ಬರು ಪ್ರಯಾಣಿಕರು ಘಟನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮುಖಾಮುಖಿ ಡಿಕ್ಕಿಯಲ್ಲಿ 9ಮಂದಿ ಗಾಯಗೊಂಡಿದ್ದು, ಮೂರು ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಹಾಗೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |