ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಲು ಕಾಲಾವಕಾಶ ಕೋರುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಸಲ್ಲಿಸಲು ನಿರ್ಧರಿಸಿದೆ.
ಜುಲೈ 31ರೊಳಗೆ ಪಾಲಿಕೆ ಚುನಾವಣೆ ನಡೆಸಬೇಕೆಂಬುದು ಹೈಕೋರ್ಟ್ ನೀಡಿರುವ ಗಡುವಿನಲ್ಲಿ ಚುನಾವಣೆ ನಡೆಸುವುದು ಸಾಧ್ಯವಿಲ್ಲದ ಕಾರಣ ಚುನಾವಣೆಯನ್ನು ಮುಂದೂಡುವಂತೆ ನ್ಯಾಯಾಲಯವನ್ನು ಕೋರಲು ಸರ್ಕಾರ ನಿರ್ಧರಿಸಿದೆ.
ಪಾಲಿಕೆಯ ವಾರ್ಡ್ ಪುನರ್ ವಿಂಗಡನೆಯ ಕುರಿತು ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಸರಿಪಡಿಸಿ ಇನ್ನೊಂದು ವಾರದಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ ಬಳಿಕ ಹೈಕೋರ್ಟ್‌ಗೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಈಗಾಗಲೇ ಹೈಕೋರ್ಟ್ ಎರಡು ಬಾರಿ ಈ ಬಗ್ಗೆ ಗಡುವು ನೀಡಿದ್ದು, ಮೂರನೇ ಬಾರಿಯೂ ಇದರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರವೇ ಸ್ವಯಂ ಪ್ರೇರಿತರಾಗಿ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. |