ತನ್ನ ಮೂರು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿ ನೀರಿನ ತೊಟ್ಟಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಗರದ ಪರಪ್ಪನ ಅಗ್ರಹಾರದ ರಾಯಸಂದ್ರದಲ್ಲಿ ಶುಕ್ರವಾರ ನಡೆದಿದೆ.
ಬಾಗಲಕೋಟೆಯ ಹಸನ್ ಸಾಬ್ ಕುಟುಂಬ ನಗರದಲ್ಲಿ ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಹಸನ್ ಸಾಬ್ ಪತ್ನಿ ಚಾಂದ್ ಬೀ (35) ತನ್ನ ಮೂರು ಮಕ್ಕಳಾದ ರಿಯಾಜ್ (8ವ), ಸಿರಾಜ್ (6ವ) ಹಾಗೂ ಸಮೀರ್ (3ವ)ಗೆ ವಿಷವುಣಿಸಿದ ನಂತರ ತಾನು ನೀರಿನ ತೊಟ್ಟಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತರ ಶವಗಳನ್ನು ಶವಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪರೀಕ್ಷೆಯ ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
|