ಭಾಷಾ ಮಾಧ್ಯಮ ವಿವಾದಕ್ಕೆ ಸಂಬಂಧಿಸಿದಂತೆ ಪೂರ್ಣಪೀಠದ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಛೀಮಾರಿ ಹಾಕಿದೆ. ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಷಾ ಮಾಧ್ಯಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎನ್. ಕುಮಾರ್ ಹಾಗೂ ಶ್ರೀನಿವಾಸ ಗೌಡ ಅವರುಗಳನ್ನೊಳಗೊಂಡ ನ್ಯಾಯಪೀಠವು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.ಭಾಷಾ ಮಾಧ್ಯಮದ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಒತ್ತಡ ಹೇರಬಾರದೆಂದು ಈ ಮೊದಲೇ ಸೂಚನೆ ನೀಡಿತ್ತು. ಆದರೆ ಆ ಆದೇಶವನ್ನು ಒಂದು ವರ್ಷವಾದರೂ ಪಾಲಿಸದಿರುವ ಸರ್ಕಾರದ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಮೂಲಕ ನ್ಯಾಯಾಂಗ ವ್ಯವಸ್ಥೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವ ಅಧಿಕಾರಿಗಳು ಆದೇಶ ಪಾಲಿಸದಿದ್ದರೆ ಮನೆ ಹೋಗಿ ಎಂದು ಕಿಡಿಕಾರಿದೆ. ಅಲ್ಲದೇ ಈ ಕುರಿತು ಜುಲೈ 8ರೊಳಗೆ ವಿವರಣೆ ನೀಡುವಂತೆ ಹೈಕೋರ್ಟ್ ಗಡುವು ನೀಡಿದೆ. |