ನಗರದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 50 ಜನರನ್ನು ಬಂಧಿಸಲಾಗಿದ್ದು, ಇಂತಹ ಘಟನೆಗಳು ನಡೆಯದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಪೊಲೀಸರು ಹಾಗೂ 2 ಆರ್ಎಎಫ್ ಪಡೆಯನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮತ್ತು ನಗರ ಪೊಲೀಸ್ ಆಯುಕ್ತರು ಪರಿಸ್ಥಿತಿ ನಿಭಾಯಿಸಿ, ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಇದೇ ವೇಳೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಪ್ರತಿ ತಿಂಗಳೂ ಧಾರ್ಮಿಕ ಮುಖಂಡರು ಮತ್ತು ಜನ ಪ್ರತಿನಿಧಿಗಳ ಸಭೆ ಕರೆದು ಸ್ಥಳೀಯ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
|